ಮುಖಪುಟ || ನಮ್ಮನ್ನು ಸಂಪರ್ಕಿಸಿ || Kannada Version


ಸಂಸ್ಥೆಯ ಬಗ್ಗೆ

ಸಿಆಸುಇ(ಜನಸ್ಪಂದನ)ಯ ಪ್ರಧಾನ ಕಾಯದರ್ಶಿ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಸಿ.ಆ.ಸು.ಇ(ಜನಸ್ಪಂದನ) ಇವರು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಗಳ ಮುಖ್ಯ ಕಾರ್ಯನರ್ವಹಣಾಧಿಕಾರಿಗಳು, ಇಲಾಖಾ ಮುಖ್ಯಸ್ಥರುಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಗಳಲ್ಲಿ ಬಾಕಿ ಇರುವ ಸಾರ್ವಜನಿಕ ಕುಂದುಕೊರತೆ ಅರ್ಜಿಗಳ ವಿಲೇವಾರಿಯ ಪ್ರಗತಿಯನ್ನು ಪರಿಶೀಲಿಸುತ್ತಾರೆ ಹಾಗೂ ಅವುಗಳನ್ನು ವಿಲೇ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡುತ್ತಾರೆ

ಸಿಆಸುಇ(ಜನಸ್ಪಂದನ ಕೋಶ)ಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗವು ಸಿಆಸುಇ(ಜನಸ್ಪಂದನ ಕೋಶ)ಯಲ್ಲಿ ಸ್ವೀಕೃತವಾದ ಸಾರ್ವಜನಿಕ ಕುಂದುಕೊರತೆ ಅರ್ಜಿಗಳ ವಿಲೇವಾರಿಯನ್ನು ಪರಿಶೀಲಿಸುತ್ತದೆ ಮತ್ತು ಸಾರ್ವಜನಿಕ ಕುಂದುಕೊರತೆ ಅರ್ಜಿಗಳ ವಿಲೇವಾರಿ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಗಾಗ್ಗೆ ಸೂಕ್ತ ಸೂಚನೆ ಮತ್ತು ಸಲಹೆಗಳನ್ನು ನೀಡುತ್ತದೆ

ಸಿಆಸುಇ (ಜನಸ್ಪಂದನ)ಯು, ಹೋಬಳಿ ಮಟ್ಟದ ಜನಸ್ಪಂದನ ಸಭೆಗಳ ಮೇಲ್ವಿಚಾರಣೆ ಮಾಡುತ್ತದೆ ಮತ್ತು ಈ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನ ಕಾರ್ಯನಿರ್ವಹಣೆ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಇತರ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡುತ್ತದೆ.

ಮಾಹಿತಿ ಹಕ್ಕು ಅಧಿನಿಯಮ, 2005ರ ಅನುಷ್ಠಾನಕ್ಕಾಗಿ ಸಿಆಸುಇ (ಜನಸ್ಪಂದನ)ಯು ಸಮನ್ವಯ ಇಲಾಖೆಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಮಾಹಿತಿ ಹಕ್ಕು ಅಧಿನಿಯಮದ ಅನುಷ್ಠಾನಕ್ಕೆ ಸಂಬಂಧಿಸಿದ ವಿಷಯಗಳನ್ನು ನಿರ್ವಹಿಸುತ್ತದೆ, ಮಾಹಿತಿ ಹಕ್ಕು ಅಧಿನಿಯಮ, 2005 ಮತ್ತು ಕರ್ನಾಟಕ ಮಾಹಿತಿ ಹಕ್ಕು ನಿಯಮಗಳು, 2005 ಮತ್ತು ಕರ್ನಾಟಕ ಮಾಹಿತಿ ಆಯೋಗದ ಆಡಳಿತಾತ್ಮಕ ವಿಷಯಗಳ ಬಗ್ಗೆ ಸ್ಪಷ್ಟೀಕರಣ ನೀಡುತ್ತದೆ.