ಮುಖಪುಟ || ನಮ್ಮನ್ನು ಸಂಪರ್ಕಿಸಿ || Kannada Version


ಜನಸ್ಪಂದನ

ಸರ್ಕಾರದ ಪ್ರಧಾನ ಕಾರ್ಯದರ್ಶಿ, ಸಿ.ಆ.ಸು.ಇ(ಜನಸ್ಪಂದನ) ಇವರು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಇಲಾಖಾ ಮುಖ್ಯಸ್ಥರುಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಗಳಲ್ಲಿ ಬಾಕಿ ಇರುವ ಸಾರ್ವಜನಿಕ ಕುಂದುಕೊರತೆ ಅರ್ಜಿಗಳ ವಿಲೇವಾರಿಯ ಪ್ರಗತಿಯನ್ನು ಪರಿಶೀಲಿಸುತ್ತಾರೆ ಹಾಗೂ ಅವುಗಳನ್ನು ವಿಲೇ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡುತ್ತಾರೆ.

ಸಿಆಸುಇ(ಜನಸ್ಪಂದನ ಕೋಶ)ಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗವು ಸಿಆಸುಇ(ಜನಸ್ಪಂದನ ಕೋಶ)ಯಲ್ಲಿ ಸ್ವೀಕೃತವಾದ ಸಾರ್ವಜನಿಕ ಕುಂದುಕೊರತೆ ಅರ್ಜಿಗಳ ವಿಲೇವಾರಿಯನ್ನು ಪರಿಶೀಲಿಸುತ್ತದೆ ಮತ್ತು ಸಾರ್ವಜನಿಕ ಕುಂದುಕೊರತೆ ಅರ್ಜಿಗಳ ವಿಲೇವಾರಿ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಗಾಗ್ಗೆ ಸೂಕ್ತ ಸೂಚನೆ ಮತ್ತು ಸಲಹೆಗಳನ್ನು ನೀಡುತ್ತದೆ.

ಸಿಆಸುಇ (ಜನಸ್ಪಂದನ)ಯು, ಹೋಬಳಿ ಮಟ್ಟದ ಜನಸ್ಪಂದನ ಸಭೆಗಳ ಮೇಲ್ವಿಚಾರಣೆ ಮಾಡುತ್ತದೆ ಮತ್ತು ಈ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನ/ ಕಾರ್ಯನಿರ್ವಹಣೆ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಇತರ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡುತ್ತದೆ. ಹೋಬಳಿ ಮಟ್ಟದ ಜನಸ್ಪಂದನ ಸಭೆಯ ಕಾರ್ಯಕ್ರಮವು ರಾಜ್ಯಾದ್ಯಾಂತ 20.09.2008ರಂದು ಪ್ರಾರಂಭವಾಯಿತು. ಈ ಕಾರ್ಯಕ್ರಮವು ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಚಾರಣೆಯಲ್ಲಿದೆ ಮತ್ತು ತುಂಬ ಯಶಸ್ವಿಯಾಗಿದೆ. ಜನರ ಕುಂದುಕೊರತೆಗಳನ್ನು ಅವರವರ ಮನೆ ಬಾಗಿಲಲ್ಲೇ ನಿವಾರಿಸುವಲ್ಲಿ ಈ ಕಾರ್ಯಕ್ರಮವು ಅತ್ಯಂತ ಜನಪ್ರಿಯವಾಗಿದೆ. ಈ ಕಾರ್ಯಕ್ರಮದ ಜಾರಿಯ ನಂತರ, ತಮ್ಮ ಕುಂದುಕೊರತೆಗಳ ನಿವಾರಣೆಗೆ ರಾಜ್ಯ/ಜಿಲ್ಲೆ/ತಾಲೂಕು ಕೇಂದ್ರಸ್ಥಾನಗಳ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಲು ಬರುವ ಜನರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ.

ಆಹಾರ ಭದ್ರತೆ

ಕರ್ನಾಟಕ ಸರ್ಕಾರದ ಆಹಾರ ಭದ್ರತಾ ಯೋಜನೆಗಳಾದ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿ.ಡಿ.ಎಸ್), ಐ.ಸಿ.ಡಿ.ಎಸ್ ಮಧ್ಯಾಹ್ನದ ಊಟದ ಯೋಜನೆ ಇತ್ಯಾದಿ ಯೋಜನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಕುಂದುಕೊರತೆಗಳ ನಿವಾರಣೆಯನ್ನು ನೋಡಿಕೊಳ್ಳಲು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯಾನಿರ್ವಾಣಾದಿಕಾರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನೊಳಗೊಂಡ ಮೂವರ ಸದಸ್ಯರ ಸಮಿತಿಯೊಂದನ್ನು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿದೆ.

ಹೋಬಳಿ ಮಟ್ಟದ ಜನಸ್ಪಂದನ ಸಭೆಗಳಲ್ಲೂ ಸಹ ಆಹಾರ ಭದ್ರತೆ ಯೋಜನೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ಪ್ರತಿ ತಿಂಗಳ ಮೊದಲನೇ ಶನಿವಾರದಂದು ಕೈಗೆತ್ತಿಕೊಳ್ಳಲಾಗುತ್ತದೆ. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ದಿ ಆಯುಕ್ತರು ಜಿಲ್ಲೆಗಳಿಂದ ಸ್ವೀಕೃತವಾದ ವರದಿಗಳನ್ನು ಪರಿಶೀಲಿಸುತ್ತಾರೆ ಮತ್ತು ಸಂಬಂಧಿಸಿದ ಜಿಲ್ಲಾ ಪ್ರಾಧಿಕಾರಗಳಿಗೆ ಸೂಕ್ತ ಸೂಚನೆಗಳನ್ನು ನೀಡುತ್ತಾರೆ.